ಹುಬ್ಬಳ್ಳಿ | ಗ್ಯಾಸ್ ಸಿಲಿಂಡರ್ ಸ್ಫೋಟ: ಒಂಭತ್ತು ಮಂದಿ ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ ಗಾಯ
ಗಾಯಾಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಹುಬ್ಬಳ್ಳಿ: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂಭತ್ತು ಮಂದಿ ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಸಾಯಿನಗರದ ದೇವಸ್ಥಾನವೊಂದರಲ್ಲಿ ರವಿವಾರ ತಡರಾತ್ರಿ ಸಂಭವಿಸಿದೆ.
ಸಾಯಿನಗರದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ಶಿಬಿರದಲ್ಲಿ ವ್ರತಧಾರಿಗಳು ನಿದ್ರಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಡುಗೆ ಮಾಡಲು ತಂದಿರಿಸಿದ್ದ ಸಿಲಿಂಡರ್ ನಲ್ಲಿ ಸೋರಿಕೆಯಾಗಿದ್ದರಿಂದ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡಿರುವ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story