ದೇಶಾದ್ಯಂತ ಮೈಕ್ರೋ ಫೈನಾನ್ಸ್‌ಗಳು ಬಂದ್ ಆಗಬೇಕು : ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ : ಮೈಕ್ರೋ ಫೈನಾನ್ಸ್‌ಗಳು ರಾಜ್ಯವಷ್ಟೇ ಅಲ್ಲ, ಇಡೀ ದೇಶದೆಲ್ಲೆಡೆ ಸಮಸ್ಯೆಯಿದೆ. ದೇಶಾದ್ಯಂತ ಮೈಕ್ರೋ ಫೈನಾನ್ಸ್‌ಗಳು ಬಂದ್ ಆಗಬೇಕು ಎಂದು ಸಚಿವರಾದ ಸಂತೋಷ್ ಲಾಡ್ ಹೇಳಿದರು.
ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹುರಾಷ್ಟ್ರೀಯ ಕಂಪನಿಗಳು ಹಾಗೂ ರಾಷ್ಟ್ರೀಯ ಬ್ಯಾಂಕ್‌ಗಳು ಹಣ ಸಂಗ್ರಹಿಸಿ ಸ್ವಸಹಾಯ ಸಂಘಗಳ ಮೂಲಕ ಸಾಲ ನೀಡುತ್ತಾರೆ. ಇದರಿಂದಾಗಿ ಜನರಿಗೆ ಬಡ್ಡಿ ಹೊರೆ ಜಾಸ್ತಿಯಾಗುತ್ತೆ. ಈ ನಿಟ್ಟಿನಲ್ಲಿ ಮೈಕ್ರೋ ಫೈನಾನ್ಸ್ ಸಾಧಕ-ಬಾಧಕಗಳನ್ನು ನೋಡಬೇಕು. ಸರಕಾರವು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಶ್ರೀರಾಮಲು ಕಾಂಗ್ರೆಸ್ ಬರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶ್ರೀರಾಮುಲು ಅವರು ನಮಗೆ ವೈಯಕ್ತಿಕವಾಗಿ ತುಂಬಾ ಹತ್ತಿರದವರು. ಶ್ರೀರಾಮುಲು ಕಾಂಗ್ರೆಸ್ ಗೆ ಬಂದರೆ ಅವರನ್ನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ಅವರು ಕಾಂಗ್ರೆಸ್ ಗೆ ಬಂದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ಬರುವ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಯಾವ ಚರ್ಚೆಯಾಗಿದೆಯೋ ಗೊತ್ತಿಲ್ಲ. ಆದರೆ ಅವರು ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತಿಸುತ್ತೇನೆಂದು ಅವರು ನುಡಿದರು.