ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿದ್ದ ಗದಗ-ಬೆಟಗೇರಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ
ಗದಗ: ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳು ಕರೆ ನೀಡಿದ್ದ ಗದಗ-ಬೆಟಗೇರಿ ಅವಳಿ ನಗರದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಬಂದ್ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಅವಳಿ ನಗರಗಳಲ್ಲಿ ಅಂಗಡಿ-ಮುಗ್ಗಟ್ಟುಗಳು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದರು. ಅಲ್ಲದೆ, ನಗರದ ಕೆಲವೆಡೆ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವೂ ವಿರಳವಾಗಿತ್ತು. ಮಾರುಕಟ್ಟೆ ಸಂಪೂರ್ಣ ಬಂದ್ ಆಗಿತ್ತು.
ಬಂದ್‍ಗೆ ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ, ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬೆಂಬಲ ವ್ಯಕ್ತಪಡಿದ್ದವು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಲಾಗಿದೆ.
"ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಸಂಸತ್ ಭವನದಲ್ಲಿ ಅವಹೇಳನ ಮಾಡಿದ ಗೃಹ ಸಚಿವ ಅಮಿತ್ ಶಾ ಅವರನ್ನು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಕೂಡಲೇ ಸಂಪುಟದಿಂದ ಕೈಬಿಡಬೇಕು. ಅಮಿತ್ ಶಾ ಅವರು ದೇಶದ ಜನತೆಗೆ ಕ್ಷಮಾಯಾಚನೆ ಮಾಡಬೇಕು, ಇದನ್ನು ಮಾಡದೆ ಹೋದರೆ ಮತ್ತೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು"
-ಚಂದ್ರಕಾಂತ್ ಚವ್ಹಾಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯ ಕರ್ನಾಟಕ ಸಂಘಟನೆ