Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಮಂಡ್ಯ ಟಿಕೆಟ್ | ಸುಮಲತಾರ ಮನವೊಲಿಕೆ...

ಮಂಡ್ಯ ಟಿಕೆಟ್ | ಸುಮಲತಾರ ಮನವೊಲಿಕೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ31 March 2024 12:32 PM IST
share
ಮಂಡ್ಯ ಟಿಕೆಟ್ | ಸುಮಲತಾರ ಮನವೊಲಿಕೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

ಗದಗ, ಮಾ.31: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವ ಬಗ್ಗೆ ಯಾವುದೇ ಗೊಂದಲ ಇಲ್ಲ. ಎರಡೂ ಪಕ್ಷಗಳ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ. ಸುಮಲತಾರೊಂದಿಗೆ ನಮ್ಮವರು ಮಾತುಕತೆ ನಡೆಸಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರು ಮಾತನಾಡಿದ್ದಾರೆ. ಅವರ ಮನವೊಲಿಕೆ ಆಗುತ್ತಿದೆ. ಯಾವುದೇ ಗೊಂದಲ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗನಲ್ಲಿ ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಜೊತೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ. ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಅವರೂ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದರು.

ಜೆಡಿಸ್ ಹಾಗೂ ಬಿಜೆಪಿ ನಡುವೆ ರಾಜ್ಯಮಟ್ಟದಲ್ಲಿ ಮೈತ್ರಿ ಆಗಿರುವುದರಿಂದ ರಾಜ್ಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುತ್ತಿದೆ. ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಮೊನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲ ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಮುಂದುವರಿಸಿಕೊಂಡು ಹೋಗಬೇಕು ಎಂದು ತೀರ್ಮಾನ ಮಾಡಲಾಗಿದೆ ಅದರಂತೆ ಕ್ಷೇತ್ರದಲ್ಲಿ ಸಮನ್ವಯ ಸಭೆ ಮಾಡುತ್ತೇವೆ ಎಂದು ಹೇಳಿದರು.

ಬ್ಲಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ?

ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ, ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನಿಸಿದ್ದರು. ಆ ಹಿನ್ನೆಲೆಯಲ್ಲಿ ದೇವೇಗೌಡರು ಅವರ ಗರ್ವಭಂಗವಾಗಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ನಾವು ಕಾಂಗ್ರೆಸ್ ವಿರುದ್ಧ ಮೈತ್ರಿ ಮಾಡಿಕೊಂಡಿದ್ದೇವೆ. ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಹೀಗಾಗಿ ಅವರ ವಿರುದ್ದ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.

ಇದೇ ವೇಳೆ ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಯಾವುದೇ ಪಕ್ಷದ ಅಭ್ಯರ್ಥಿ ಇರಲಿ ಮಹಿಳೆಯರ ಬಗ್ಗೆ ಮಾತನಾಡುವುದು ಸರಿಯಲ್ಲ. ಮಹಿಳೆಯರಿಗೆ ಅವಮಾನ ಮಾಡಿದಂತಾಗುತ್ತದೆ. ಅದಕ್ಕೆ ಸಹಜವಾಗಿ ವಿರೋಧ ವ್ಯಕ್ತವಾಗುತ್ತದೆ ಎಂದು ಹೇಳಿದರು.

ಇನ್ನು ಜೆಡಿಎಸ್ ಶಾಲು ಹಾಕಿಕೊಂಡಿರುವುದಕ್ಕೆ ಏನು ಅನಿಸುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಜವಾಬ್ದಾರಿ ಡಬಲ್ ಆಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X