ಹಾಸನ | ಟಿಪ್ಪರ್ ಢಿಕ್ಕಿ; ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಳದಲ್ಲೇ ಮೃತ್ಯು

ಅಧ್ಯಕ್ಷೆ ಮಲ್ಲಿಗಮ್ಮ
ಹಾಸನ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದರಿಂದ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಮೃತರನ್ನು ಹನಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಗಮ್ಮ (58) ಎಂದು ಗುರುತಿಸಲಾಗಿದೆ.
ಮಲ್ಲಿಗಮ್ಮ ಅವರು ತಮ್ಮ ಬ್ಯಾಂಕ್ ಕಾರ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ, ಹಿಂದಿನಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬೇಲೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Next Story