ಹಾಸನ | ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಹಾಸನ : ತಾಲ್ಲೂಕಿನ ಗೋಪನ ಹಳ್ಳಿಯಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಸಾಕು ಪ್ರಾಣಿಗಳನ್ನು ತಿಂದು ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರು.
ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಸಮೀಪದಲ್ಲಿ ಬೋನಿನಲ್ಲಿ ನಾಯಿ ಕಟ್ಟಿಹಾಕಿ ಇರಿಸಿದ್ದರು. ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸಿಕ್ಕಿಹಾಕಿಕೊಂಡಿದೆ.
ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Next Story