ಹಾಸನ | ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ
ಹಾಸನ : ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿ ಮಾಡಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ನಗರದ ಸಮೀಪದ ಗವೇನಹಳ್ಳಿಯಲ್ಲಿರುವ ಗೆಂಡೆಕಟ್ಟೆ ಅರಣ್ಯ ಧಾಮದ ಬಳಿ ಕೋಳಿ ಫಾರಂ ಪಕ್ಕದಲ್ಲಿ ಇಡಲಾಗಿದ್ದ ಬೋನಿಗೆ ಮೂರು ವರ್ಷದ ಚಿರತೆ ತಡರಾತ್ರಿ ಸೆರೆ ಸಿಕ್ಕಿದೆ. ಹಗಲು-ರಾತ್ರಿ ಎನ್ನದೆ ಚಿರತೆ ಎಲ್ಲೆಂದರಲ್ಲಿ ತಿರುಗಾಡಿ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿತ್ತು.
ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಹಲವು ಬಾರಿ ಒತ್ತಾಯಿಸಿದ್ದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗಳು ಪುರುಷೋತ್ತಮ್ ಎಂಬುವವರ ಕೋಳಿ ಫಾರಂ ಪಕ್ಕದಲ್ಲೇ ಚಿರತೆಯನ್ನು ಸರೆಹಿಡಿಯಲು ಬೋನು ಇಟ್ಟಿದ್ದರು. ಆದರೆ ಇಂದು(ಅ.12) ಬೆಳಿಗ್ಗೆ ಸುಮಾರು ಮೂರು ವರ್ಷದ ಚಿರತೆ ಬೋನಿಗೆ ಬಿದ್ದಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಸೆರೆಯಾದೆ ಚಿರತೆಯನ್ನು ವಶಪಡಿಸಿಕೊಂಡಿದ್ದಾರೆ.
Next Story