ಹಾಸನ | ಟೈರ್ ಪಂಕ್ಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

ಹಾಸನ: ಟೈರ್ ಪಂಚರ್ ಆಗಿದ್ದರಿಂದ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲೂಕಿನ ಶಾಂತಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಹಾಸನದ ಸೆಂಟ್ರಲ್ ಕಾಮರ್ಸ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ, ದಾಸನಪುರ ಗ್ರಾಮ ನಿವಾಸಿ ರೇವಂತ್(18) ಮೃತಪಟ್ಟವರು.
ಹಾಸನ ತಾಲೂಕಿನ, ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಲಾರಿಯೊಂದು ಟೈರ್ ಪಂಕ್ಚರ್ ಆಗಿ ರಸ್ತೆಯಲ್ಲೇ ನಿಂತಿತ್ತು. ಇದೇ ರಸ್ತೆಯಲ್ಲಿ ಬೈಕ್ನಲ್ಲಿ ಬಂದ ರೇವಂತ್ ಕತ್ತಲೆಯಲ್ಲಿ ಲಾರಿಯನ್ನು ಗಮನಿಸಿದೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾರೆನ್ನಲಾಗಿದೆ.
ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story