ಹಾಸನ | ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ : ತಂದೆ-ಮಗ ಮೃತ್ಯು, ಮಹಿಳೆ ಗಂಭೀರ
ಹಾಸನ : ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಮೃತಪಟ್ಟು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಅಮಾನಿಕೆರೆ ಬಳಿ ನಡೆದಿದೆ.
ರಾಕೇಶ್ (28), ಮೋಕ್ಷಿತ್ ಗೌಡ (8) ಮೃತರು. ಮೂವರು ಕಾರಿನಲ್ಲಿ ಚನ್ನರಾಯಪಟ್ಟಣದಿಂದ ಶ್ರವಣೇರಿ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅಮಾನಿಕೆರೆ ಬಳಿ ಹೋಗುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಢಿಕ್ಕಿಯಾಗಿ ಬಳಿಕ ಮರಕ್ಕೆ ಹೊಡೆದಿದೆ. ಅಪಘಾತದ ಗಂಭೀರತೆಗೆ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರಾಕೇಶ್ ಅವರ ಪತ್ನಿ ಆಶಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story