ಕಡಗರವಳ್ಳಿ-ಯಡಕುಮರಿ ಮಧ್ಯೆ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತ | ಮಂಗಳೂರು - ಬೆಂಗಳೂರು ರೈಲು ಸಂಚಾರ ಸ್ಥಗಿತ
ಸಾಂದರ್ಭಿಕ ಚಿತ್ರ
ಸಕಲೇಶಪುರ : ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಶುಕ್ರವಾರ ಮಣ್ಣು ಕುಸಿದಿರುವ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ.
ಶುಕ್ರವಾರ ಸಂಜೆ 6.35ರ ಸುಮಾರಿಗೆ ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮರಿ ಮಧ್ಯೆ ಕಿ.ಮೀ. 63ರಲ್ಲಿ ಭಾರೀ ಪ್ರಮಾಣದ ಮಣ್ಣು ಕುಸಿದಿದೆ ಎನ್ನಲಾಗಿದೆ. ಇದರಿಂದ ಮಂಗಳೂರು-ರಾಜಧಾನಿ ಬೆಂಗಳೂರು ನಡುವಿನ ರೈಲ್ವೆ ಸಂಚಾರ ಕಡಿತಗೊಂಡಿದೆ.
ಬೆಂಗಳೂರು-ಕಾರವಾರ (ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸಪ್ರೆಸ್), ಮುರುಡೇಶ್ವರ-ಬೆಂಗಳೂರು, ಕಣ್ಣೂರು-ಬೆಂಗಳೂರು ರೈಲು ಸಂಚಾರ ಬಂದ್ ಆಗಿದೆ. ಮಣ್ಣು ಕುಸಿತ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ದೌಡಾಯಿಸಿದ್ದು ತೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
Next Story