ಎತ್ತಿನಹೊಳೆ ಯೋಜನೆ ಉದ್ಘಾಟನಾ ಸ್ಥಳದಲ್ಲಿ ಹಾಕಿದ್ದ ಚಪ್ಪರ ಕುಸಿತ
ಹಾಸನ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮ ಆರಂಭಕ್ಕೆ ಮುನ್ನ ಉದ್ಘಾಟನಾ ಸ್ಥಳದಲ್ಲಿ ಹಾಕಿದ್ದ ಚಪ್ಪರ ಕುಸಿದುಬಿದ್ದ ಘಟನೆ ಸಂಭವಿಸಿದೆ.
ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮಧ್ಯಾಹ್ನ 12ಕ್ಕೆ ಚಾಲನೆ ನೀಡಿದ ಬಳಿಕ ಹೆಬ್ಬನಹಳ್ಳಿಯಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಅದಕ್ಕಾಗಿ ಹೂವು, ತಳಿರು ತೋರಣಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಇದರು ಚಪ್ಪರ 11:15ರ ಕುಸಿದುಬಿದ್ದಿದೆ.
ಬಾಗಿನ ಅರ್ಪಣೆಗಿಂದ ಮುಂಚೆ ಘಟನೆ ಸಂಭವಿಸಿದ್ದರಿಂದ ಸಂಭಾವ್ಯ ಅಪಾಯ ತಪ್ಪಿದೆ.
Next Story