ಹಾವೇರಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ಮೂರು ಅಂಗಡಿಗಳು ಭಸ್ಮ
ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಮೂರು ಅಂಗಡಿಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಹಿರೆಕೇರೂರು ತಾಲೂಕಿನ ಚಿಕ್ಕೆರೂರು ಗ್ರಾಮದಲ್ಲಿ ಶನಿವಾರ ನಡೆದಿದೆ.
ಭೀಮೆಗೌಡ ಹಂದ್ರಾಳ ಎಂಬವರಿಗೆ ಸೇರಿದ ಬೇಕರಿ ಶಾಪ್, ಜಗತ್ ಸಿಂಗ್ ಎಂಬವರಿಗೆ ಸೇರಿದ ಎಲೆಕ್ಟ್ರಿಕಲ್ ಶಾಪ್ ಮತ್ತು ಫೈರೋಝ್ ಕಾಗಿನಲ್ಲಿ ಎಂಬವರಿಗೆ ಸೇರಿದ ಚಪ್ಪಲಿ ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ.
ಸುಮಾರು ಅರ್ಧ ಗಂಟೆ ಬೆಂಕಿ ಹೊತ್ತಿ ಉರಿದಿದ್ದು, ಅಂದಾಜು 50-60 ಲಕ್ಷ ಮೌಲ್ಯದ ಆಹಾರ ಪದಾರ್ಥಗಳು, ಚಪ್ಪಲಿ, ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಸ್ಥಳಕ್ಕೆ ಶಾಸಕ ಯು.ಬಿ ಬಣಕಾರ ಭೇಟಿ ನೀಡಿ ಮಾಲೀಕರಿಗೆ ಸಾಂತ್ವನ ಹೇಳಿದ್ದಾರೆ.
Next Story