Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಓಮದ ನೀರಿನ ಸೇವನೆಯ ಅದ್ಭುತ ಆರೋಗ್ಯ...

ಓಮದ ನೀರಿನ ಸೇವನೆಯ ಅದ್ಭುತ ಆರೋಗ್ಯ ಲಾಭಗಳು

ವಾರ್ತಾಭಾರತಿವಾರ್ತಾಭಾರತಿ1 Aug 2023 7:42 PM IST
share
ಓಮದ ನೀರಿನ ಸೇವನೆಯ ಅದ್ಭುತ ಆರೋಗ್ಯ ಲಾಭಗಳು

ಕ್ಯಾರಮ್ ಸೀಡ್ಸ್ ಅಥವಾ ಬಿಷಪ್ಸ್ ವೀಡ್ ಎಂದೂ ಕರೆಯಲಾಗುವ ಓಮ (ಅಜವೈನ್) ಕಾಳುಗಳು ವೈಜ್ಞಾನಿಕವಾಗಿ ಟ್ರಾಕಿಸ್ಪರ್ಮಮ್ ಎಂದು ಕರೆಯಲಾಗುವ ಸಸ್ಯದ ಬೀಜಗಳಾಗಿದ್ದು, ಭಾರತೀಯ ಮತ್ತು ಮಧ್ಯಪ್ರಾಚ್ಯದ ಅಡಿಗೆ ಮನೆಗಳಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತದೆ.

ತೀಕ್ಷ್ಣ ಹಾಗೂ ವಿಶಿಷ್ಟ ಪರಿಮಳ, ಸ್ವಲ್ಪ ಕಹಿ ಮತ್ತು ಕಟು ರುಚಿಯನ್ನು ಹೊಂದಿರುವ ಓಮ ಕಾಳುಗಳು ಸಮೃದ್ಧ ಸಾರಭೂತ ತೈಲಗಳು, ಖನಿಜಗಳು ಮತ್ತು ವಿಟಾಮಿನ್ಗಳನ್ನು ಒಳಗೊಂಡಿರುವುದರಿಂದ ಆಯುರ್ವೇದ ಔಷಧಿಗಳ ತಯಾರಿಕೆಯಲ್ಲಿಯೂ ವ್ಯಾಪಕವಾಗಿ ಬಳಕೆಯಾಗುತ್ತವೆ.

ಈ ಎಲ್ಲ ಬಳಕೆಗಳ ಹೊರತಾಗಿ ಓಮ ಕಾಳು ತನ್ನ ಆರೋಗ್ಯವರ್ಧಕ ಗುಣಗಳಿಂದಾಗಿಯೂ ಹೆಸರಾಗಿದೆ.

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ

ನೀರಿನಲ್ಲಿ ನೆನೆಸಿಟ್ಟ ಓಮ ಕಾಳುಗಳ ಸೇವನೆಯು ಜೀರ್ಣಕಾರಿ ಕಿಣ್ವಗಳ ಬಿಡುಗಡೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಲು ನೆರವಾಗುತ್ತದೆ. ಅದು ಅಜೀರ್ಣ, ಹೊಟ್ಟೆಯುಬ್ಬರ ಮತ್ತು ಮಲಬದ್ಧತೆಯ ಲಕ್ಷಣಗಳನ್ನೂ ಕಡಿಮೆ ಮಾಡುತ್ತದೆ.

ಆಮ್ಲೀಯತೆಯನ್ನು ನಿವಾರಿಸುತ್ತದೆ

ಆ್ಯಸಿಡಿಟಿ ಅಥವಾ ಆಮ್ಲೀಯತೆ ಮತ್ತು ಎದೆಉರಿಯಿಂದ ಪಾರಾಗಲು ಸಾಂಪ್ರದಾಯಿಕವಾಗಿ ಓಮ ಕಾಳುಗಳನ್ನು ಬಳಸಲಾಗುತ್ತಿದೆ. ಓಮ ಕಾಳುಗಳ ನೀರಿನ ಸೇವನೆಯು ಹೊಟ್ಟೆಯಲ್ಲಿ ಆಮ್ಲೀಯ ಮಟ್ಟಗಳನ್ನು ತಗ್ಗಿಸಲು ನೆರವಾಗುತ್ತದೆ.

ಉಸಿರಾಟ ಆರೋಗ್ಯವನ್ನು ಹೆಚ್ಚಿಸುತ್ತದೆ

ಅಸ್ತಮಾ, ಬ್ರಾಂಕೈಟಿಸ್ ಮತ್ತು ಕೆಮ್ಮಿನಂತಹ ಉಸಿರಾಟದ ತೊಂದರೆಗಳಿಂದ ಬಳಲುತ್ತಿರುವ ಜನರಿಗೆ ಓಮ ಕಾಳುಗಳ ನೀರಿನ ಸೇವನೆ ಉಪಯುಕ್ತವಾಗಿದೆ. ಶ್ವಾಸನಾಳವನ್ನು ಸ್ವಚ್ಛಗೊಳಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಉಸಿರಾಟವನ್ನು ಸುಗಮಗೊಳಿಸಲು ನೆರವಾಗಬಲ್ಲದು.

ಚಯಾಪಚಯವನ್ನು ಹೆಚ್ಚಿಸುತ್ತದೆ

ಓಮ ಕಾಳು ಜೀರ್ಣ ವ್ಯವಸ್ಥೆಯನ್ನು ಉತ್ತಮಗಳಿಸುವ ಮೂಲಕ ಮೆಟಾಬಲಿಸಂ ಅಥವಾ ಚಯಾಪಚಯವನ್ನು ಹೆಚ್ಚಿಸುತ್ತದೆ. ಪೋಷಕಾಂಶಗಳ ಉತ್ತಮ ಹೀರುವಿಕೆಗೆ ನೆರವಾಗುತ್ತದೆ ಮತ್ತು ಚಯಾಪಚಯ ದರ ಹಾಗೂ ಶಕ್ತಿ ಮಟ್ಟಗಳನ್ನು ಹೆಚ್ಚಿಸುತ್ತದೆ.

ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ

ಮುಟ್ಟಿನ ಸಮಯದಲ್ಲಿ ನೀರಿನಲ್ಲಿ ನೆನಸಿಟ್ಟ ಓಮ ಕಾಳುಗಳನ್ನು ಸೇವಿಸುವ ಮೂಲಕ ನೋವು ಕಡಿಮೆ ಮಾಡಲು ಸಹಕರಿಸುತ್ತದೆ. ಓಮ ಕಾಳುಗಳು ಸೆಳೆತ ಪ್ರತಿರೋಧಕ ಗುಣಗಳನ್ನು ಹೊಂದಿದ್ದು, ಇವು ಸ್ನಾಯುಗಳು ವಿಶ್ರಮಿಸಲು ಮತ್ತು ನೋವನ್ನು ಕಡಿಮೆ ಮಾಡಲು ನೆರವಾಗುತ್ತವೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಓಮ ಕಾಳುಗಳು ಅಗತ್ಯ ವಿಟಾಮಿನ್ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದ್ದು,ಇವು ಶರೀರದ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸುತ್ತವೆ. ನಿಯಮಿತವಾಗಿ ಓಮ ಕಾಳುಗಳ ನೀರಿನ ಸೇವನೆಯು ಕಾಯಿಲೆಗಳು ಮತ್ತು ಸೋಂಕುಗಳ ವಿರುದ್ಧ ಶರೀರದ ಕಾರ್ಯವಿಧಾನವನ್ನು ಹೆಚ್ಚಿಸುತ್ತದೆ.

ಕೀಲು ನೋವನ್ನು ನಿವಾರಿಸುತ್ತದೆ

ಓಮ ಕಾಳುಗಳ ನೀರು ನೋವು ನಿವಾರಕ ಗುಣಗಳನ್ನು ಹೊಂದಿದ್ದು,ಸಂಧಿವಾತಕ್ಕೆ ಸಂಬಂಧಿಸಿದ ಕೀಲು ನೋವನ್ನು ಕಡಿಮೆ ಮಾಡುತ್ತದೆ. ಕೀಲುಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡಲೂ ಅದು ನೆರವಾಗುತ್ತದೆ.

ನಿರ್ವಿಷೀಕರಣ

ನೀರಿನಲ್ಲಿ ನೆನೆಸಿಟ್ಟ ಓಮ ಕಾಳುಗಳು ನೈಸರ್ಗಿಕ ನಂಜು ನಿವಾರಕವಾಗಿ ಕಾರ್ಯ ನಿರ್ವಹಿಸುತ್ತವೆ. ಶರೀರದಿಂದ ವಿಷವಸ್ತುಗಳನ್ನು ಹೊರಕ್ಕೆ ಹಾಕಲು ನೆರವಾಗುವ ಅದು ಯಕೃತ್ತು,ಮೂತ್ರಪಿಂಡಗಳು ಮತ್ತು ಕರುಳುಗಳನ್ನು ಸ್ವಚ್ಛಗೊಳಿಸುತ್ತದೆ.

ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ

ಓಮ ಕಾಳುಗಳಲ್ಲಿರುವ ಉರಿಯೂತ ನಿರೋಧಕ ಮತ್ತು ಸೂಕ್ಷ್ಮಜೀವಿ ಪ್ರತಿರೋಧಕ ಗುಣಗಳು ಚರ್ಮದ ಆರೋಗ್ಯವನ್ನು ಕಾಯ್ದುಕೊಳ್ಳಲು ನೆರವಾಗುತ್ತವೆ. ಓಮ ಕಾಳಿನ ನೀರಿನ ಸೇವನೆಯು ಮೊಡವೆ,ಇಸುಬು ಮತ್ತು ಚರ್ಮದ ಇತರ ತೊಂದರೆಗಳನ್ನು ತಗ್ಗಿಸುವ ಮೂಲಕ ಸ್ವಚ್ಛ ಮತ್ತು ಹೊಳೆಯುವ ಚರ್ಮಕ್ಕೆ ಪೂರಕವಾಗುತ್ತದೆ.

ಓಮ ಕಾಳುಗಳು ಹಲವಾರು ಆರೋಗ್ಯ ವರ್ಧಕ ಗುಣಗಳನ್ನು ಹೊಂದಿವೆಯಾದರೂ ವೈದ್ಯಕೀಯ ಉದ್ದೇಶಗಳಿಗೆ ಬಳಕೆಯ ಮುನ್ನ ವೈದ್ಯಕೀಯ ವೃತ್ತಿಪರರ ಸಲಹೆ ಪಡೆದುಕೊಳ್ಳುವುದು ಅಗತ್ಯ.

ಕೃಪೆ: NDTV

share
ವಾರ್ತಾಭಾರತಿ
ವಾರ್ತಾಭಾರತಿ
Next Story
X