ಇಂಗ್ಲೆಂಡ್ ನಲ್ಲಿ ಕಾರು ಅಪಘಾತ: ಆಂಧ್ರ ಮೂಲದ ವಿದ್ಯಾರ್ಥಿ ಮೃತ್ಯು, ನಾಲ್ವರಿಗೆ ಗಾಯ
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಪೂರ್ವ ಇಂಗ್ಲೆಂಡ್ ನ ಲೀಸೆಸ್ಟರ್ ಶೈರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿರಂಜೀವಿ ಪಾಂಗುಲೂರಿ(32) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆದ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರೂ ಕಾರಿನಲ್ಲಿ ಲೀಸೆಸ್ಟರ್ ಶೈರ್ ನಿಂದ ಮಾರ್ಕೆಟ್ ಹಾರ್ಬರೋ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಅಪಾಯಕಾರಿ ಚಾಲನೆ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದ್ದು, ಆ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಲೀಸೆಸ್ಟರ್ ಶೈರ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story