ಟೆಕ್ಸಾಸ್ನಲ್ಲಿ ಕಾರು ಅಪಘಾತ | ಐವರು ಭಾರತೀಯರು ಮೃತ್ಯು
ಸಾಂದರ್ಭಿಕ ಚಿತ್ರ | NDTV
ನ್ಯೂಯಾರ್ಕ್: ಅಮೆರಿಕದ ಟೆಕ್ಸಾಸ್ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಆಂದ್ರಪ್ರದೇಶದ ಮೂವರು ಸೇರಿದಂತೆ ಐವರು ಭಾರತೀಯರು ಸಾವನ್ನಪ್ಪಿದ್ದು ಮತ್ತೊಬ್ಬ ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಟೆಕ್ಸಾಸ್ ರಾಜ್ಯದ ರ್ಯಾಂಡೋಲ್ಫ್ ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ 5 ಮಂದಿ ಸಾವನ್ನಪ್ಪಿದ್ದರೆ ಮತ್ತೊಬ್ಬ ಭಾರತೀಯ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರಲ್ಲಿ ಮೂವರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ನಿವಾಸಿಗಳು ಎಂದು ವರದಿಯಾಗಿದ್ದು ಅಪಘಾತದ ಬಗ್ಗೆ ತನಿಖೆ ನಡೆಸಬೇಕೆಂದು ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತೀಯರು ಆಗ್ರಹಿಸಿದ್ದಾರೆ.
Next Story