ವೃದ್ಧರ ಆರೈಕೆ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ: 11 ಮಂದಿ ಸಜೀವ ದಹನ
ಸಾಂದರ್ಭಿಕ ಚಿತ್ರ
ಪ್ಯಾರಿಸ್: ಪೂರ್ವ ಫ್ರಾನ್ಸ್ನಲ್ಲಿನ ವೃದ್ಧರ ಆರೈಕೆ ಕೇಂದ್ರದಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 11 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಆರೈಕೆ ಕೇಂದ್ರದ ಮೇಲಿನ ಮಹಡಿಯಲ್ಲಿ ಮಲಗಿದ್ದ 11 ಮಂದಿ ಸಜೀವ ದಹನಗೊಂಡಿದ್ದರೆ, 5 ಮಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ. ನೆಲ ಮಹಡಿಯಲ್ಲಿದ್ದ 12 ಮಂದಿಯನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Next Story