ಯುಎಇಯಲ್ಲಿ ಭಾರತ್ ಮಾರ್ಟ್ಗೆ ಶಂಕುಸ್ಥಾಪನೆ | ಭಾರತದ ಎಂಎಸ್ಎಂಇ ಕ್ಷೇತ್ರಕ್ಕೆ ಪ್ರಯೋಜನ: ಪ್ರಧಾನಿ ಮೋದಿ
Photo:NDTV
ಅಬುಧಾಬಿ: ಭಾರತದ ಎಂಎಸ್ಎಂಇ(ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ) ಕ್ಷೇತ್ರಕ್ಕೆ ಅಂತರಾಷ್ಟ್ರೀಯ ಖರೀದಿದಾರರನ್ನು ತಲುಪುವ ಪರಿಣಾಮಕಾರಿ ವೇದಿಕೆ ಒದಗಿಸುವ ಭಾರತ್ ಮಾರ್ಟ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಪ್ರಧಾನಿ ಶೇಖ್ ಮುಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ದುಬೈಯ `ಜೆಬೆಲ್ ಅಲಿ ಫ್ರಿ ಟ್ರೇಡ್ ಝೋನ್'ನಲ್ಲಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉಭಯ ಪ್ರಧಾನಿಗಳು ವರ್ಚುವಲ್ ವೇದಿಕೆಯ ಮೂಲಕ ಜಂಟಿಯಾಗಿ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ `ಗಲ್ಫ್, ಪಶ್ಚಿಮ ಏಶ್ಯಾ, ಆಫ್ರಿಕಾ ಮತ್ತು ಯುರೇಷಿಯಾದ ಅಂತರಾಷ್ಟ್ರೀಯ ಖರೀದಿದಾರರನ್ನು ತಲುಪಲು ಪರಿಣಾಮಕಾರಿ ವೇದಿಕೆಯನ್ನು ಒದಗಿಸುವ ಮೂಲಕ ಭಾರತದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯಗಳ ರಫ್ತುಗಳನ್ನು ಉತ್ತೇಜಿಸುವಲ್ಲಿ ಭಾರತ್ ಮಾರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ' ಎಂದರು.
ಜೆಬೆಲ್ ಆಲಿ ಬಂದರಿನ ಆಯಕಟ್ಟಿನ ಸ್ಥಳದಲ್ಲಿರುವ ಭಾರತ್ ಮಾರ್ಟ್ ಭಾರತ-ಯುಎಇ ದ್ವಿಪಕ್ಷೀಯ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಉಭಯ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.