ಈಜಿಪ್ಟ್ | ಗ್ಯಾಸ್ ಸ್ಫೋಟ ; 3 ಪೊಲೀಸ್ ಅಧಿಕಾರಿಗಳು ಮೃತ್ಯು
ಸಾಂದರ್ಭಿಕ ಚಿತ್ರ
ಕೈರೋ: ಕೈರೋದಲ್ಲಿರುವ ಈಜಿಪ್ಟ್ ಪೊಲೀಸ್ ಅಕಾಡೆಮಿಯಲ್ಲಿ ರವಿವಾರ ರಾತ್ರಿ ಸಂಭವಿಸಿದ ಗ್ಯಾಸ್ ಸ್ಫೋಟದಲ್ಲಿ ಮೂರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದು ಇತರ ಇಬ್ಬರು ಗಾಯಗೊಂಡಿರುವುದಾಗಿ ಆಂತರಿಕ ಸಚಿವಾಲಯ ಹೇಳಿದೆ.
ಪೊಲೀಸ್ ಅಕಾಡೆಮಿಯ ಕೇಂದ್ರ ಕಚೇರಿಯ ಗೋದಾಮಿನಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿದ್ದಾಗ ದುರಂತ ಸಂಭವಿಸಿದೆ. ಇದು ಭಯೋತ್ಪಾದಕ ಕೃತ್ಯವಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ಸ್ಪಷ್ಟಗೊಂಡಿದೆ ಎಂದು ಸಚಿವಾಲಯ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
Next Story