ಗಾಝಾ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 30 ಮಂದಿ ಮೃತ್ಯು
ಸಾಂದರ್ಭಿಕ ಚಿತ್ರ | PC : PTI
ಗಾಝಾ : ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗಿನವರೆಗೆ ಗಾಝಾದಲ್ಲಿ ಇಸ್ರೇಲ್ನ ವೈಮಾನಿಕ ದಾಳಿಯಲ್ಲಿ ಮಕ್ಕಳ ಸಹಿತ ಕನಿಷ್ಠ 30 ಮಂದಿ ಮೃತಪಟ್ಟಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಹೇಳಿದೆ.
ಮಧ್ಯ ಗಾಝಾದ ನುಸೀರಾತ್, ಝವೈದಾ, ಮಗಾಝಿ, ದೇರ್ ಅಲ್ ಬಲಾಹ್ ಮತ್ತಿತರ ಪ್ರದೇಶಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮಹಿಳೆಯರು, ಮಕ್ಕಳ ಸಹಿತ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಗಾಝಾದಲ್ಲಿ ಹತರಾದವರ ಸಂಖ್ಯೆ 56ಕ್ಕೆ ಏರಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಮಧ್ಯೆ, ಶುಕ್ರವಾರ ಬೆಳಿಗ್ಗೆ ಯೆಮನ್ನಿಂದ ಇಸ್ರೇಲ್ನತ್ತ ಕ್ಷಿಪಣಿಗಳನ್ನು ಪ್ರಯೋಗಿಸಿದ್ದು ಜೆರುಸಲೇಂನಲ್ಲಿ ಲಘು ಸ್ಫೋಟ ಸಂಭವಿಸಿದೆ. ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಇಸ್ರೇಲ್ ಭದ್ರತಾ ಪಡೆ ಹೇಳಿದೆ.
Next Story