ಗಾಝಾ: ಇಸ್ರೇಲ್ ದಾಳಿಯಲ್ಲಿ ವಿಶ್ವಸಂಸ್ಥೆ ಸಿಬ್ಬಂದಿ ಮೃತ್ಯು

ಸಾಂದರ್ಭಿಕ ಚಿತ್ರ | PC : PTI/AP
ಗಾಝಾ: ಗಾಝಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವಸಂಸ್ಥೆಯ ಕಚೇರಿ ಮೇಲೆ ಬುಧವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು ಇತರ ಐವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಬುಧವಾರ ಹೇಳಿದೆ.
ಬುಧವಾರ ಬೆಳಿಗ್ಗೆ ವಿಶ್ವಸಂಸ್ಥೆ ಕಚೇರಿಯ ಮೇಲೆ ಶತ್ರುಗಳು ನಡೆಸಿದ ಬಾಂಬ್ ದಾಳಿಯಲ್ಲಿ ಒಬ್ಬ ಸಿಬ್ಬಂದಿ ಸಾವನ್ನಪ್ಪಿದ್ದು ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಲ್-ಅಕ್ಸಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.
Next Story