ಗಾಝಾ, ಪಶ್ಚಿಮದಂಡೆ: ಇಸ್ರೇಲ್ ದಾಳಿಯಲ್ಲಿ 7 ಫೆಲೆಸ್ತೀನೀಯರ ಮೃತ್ಯು

PC : NDTV
ಗಾಝಾ: ಸೋಮವಾರ ರಾತ್ರಿಯಿಂದ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಗುಂಡಿನ ದಾಳಿಯಲ್ಲಿ 4 ಮಂದಿ ಸಾವನ್ನಪ್ಪಿದ್ದು ಇತರ 14 ಮಂದಿ ಗಾಯಗೊಂಡಿರುವುದಾಗಿ ಫೆಲೆಸ್ತೀನ್ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಆಕ್ರಮಿತ ಪಶ್ಚಿಮದಂಡೆಯ ಜೆನಿನ್ ನಗರದಲ್ಲಿ ಮಂಗಳವಾರ ಇಸ್ರೇಲ್ ನಡೆಸಿದ ಗುಂಡಿನ ದಾಳಿಯಲ್ಲಿ 58 ವರ್ಷದ ಮಹಿಳೆ ಸೇರಿದಂತೆ ಮೂವರು ಫೆಲೆಸ್ತೀನೀಯರು ಮೃತಪಟ್ಟಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.
ಜೆನಿನ್ನಲ್ಲಿ ಇಸ್ರೇಲಿ ಪಡೆಗಳ ಜತೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಹೋರಾಟಗಾರರು ಹತರಾಗಿದ್ದಾರೆ. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಒಬ್ಬ ಹೋರಾಟಗಾರನ ಹತ್ಯೆ ಮಾಡಿದ್ದು ಶಸ್ತ್ರಾಸ್ತ್ರಗಳಿಂದ ತುಂಬಿದ್ದ ಎರಡು ವಾಹನಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಇಸ್ರೇಲ್ನ ಸೇನೆ ಹೇಳಿದೆ.
Next Story