ಫೆಬ್ರವರಿ 11ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ
Photo: NDTV
ಇಸ್ಲಮಾಬಾದ್: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಮುಂದಿನ ವರ್ಷದ ಫೆಬ್ರವರಿ 11ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದ್ದು ಇದರೊಂದಿಗೆ ಚುನಾವಣೆ ದಿನಾಂಕದ ಕುರಿತ ದೀರ್ಘಾವಧಿಯ ಅನಿಶ್ಚಿತತೆ ಕೊನೆಗೊಂಡಂತಾಗಿದೆ.
ಕ್ಷೇತ್ರಗಳ ಪುನರ್ರಚನೆ ಪ್ರಕ್ರಿಯೆ ಜನವರಿ 29ರಂದು ಕೊನೆಗೊಳ್ಳಲಿದೆ ಎಂದು ಪಾಕ್ ಚುನಾವಣಾ ಆಯೋಗದ ಅಧಿಕಾರಿ ಸಜೀಲ್ ಸ್ವಾತಿ ಸುಪ್ರೀಂಕೋರ್ಟ್ನಲ್ಲಿ ಹೇಳಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿ ಹಾಗೂ ಪ್ರಾಂತೀಯ ವಿಧಾನಸಭೆಗಳನ್ನು ವಿಸರ್ಜಿಸಿದ 90 ದಿನಗಳೊಳಗೆ ಚುನಾವಣೆ ನಡೆಸಬೇಕೆಂದು ಸಂವಿಧಾನದಲ್ಲಿ ಉಲ್ಲೇಖಿಸಿದ್ದು ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಸಂದರ್ಭ ಚುನಾವಣಾ ಆಯೋಗ ಈ ಮಾಹಿತಿ ನೀಡಿದೆ. ಆಗಸ್ಟ್ 9ರಂದು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು ಅಧ್ಯಕ್ಷ ಆರಿಫ್ ಆಲ್ವಿ ವಿಸರ್ಜಿಸಿದ್ದರು.
Next Story