ನಾಲ್ಕು ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್
50 ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಿದ ಹಮಾಸ್
Photo: twitter.com/TehranTimes79
ಗಾಝಾ: ಕಳೆದ ಒಂದುವರೆ ತಿಂಗಳಿನಿಂದ ಗಾಝಾ ಪಟ್ಟಿಯ ಮೇಲೆ ನಿರಂತರ ಆಕ್ರಮಣ ನಡೆಸುತ್ತಿರುವ ಇಸ್ರೇಲ್ ನಾಲ್ಕು ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ.
ನಾಲ್ಕು ದಿನಗಳ ಕದನ ವಿರಾಮಕ್ಕೆ ಬದಲಾಗಿ ಗಾಝಾದಲ್ಲಿ ಒತ್ತೆಯಾಳುಗಳಾಗಿದ್ದ 50 ಮಹಿಳೆಯರು ಮತ್ತು ಮಕ್ಕಳನ್ನು ಮುಕ್ತಗೊಳಿಸುವ ಹಮಾಸ್ ಸಂಘಟನೆಯ ಒಪ್ಪಂದವನ್ನು ಬೆಂಬಲಿಸಲು ಇಸ್ರೇಲ್ ಸರ್ಕಾರ ಬುಧವಾರ ಮತ ಹಾಕಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಿದೆ.
ಅ.7 ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ13,300 ಕ್ಕೂ ಅಧಿಕ ಫೆಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ.
Next Story