ಪಶ್ಚಿಮದಂಡೆ: ಇಸ್ರೇಲ್ ದಾಳಿಯಲ್ಲಿ ಮೂರು ಮಂದಿ ಮೃತ್ಯು

PC ; aljazeera.com
ಜೆರುಸಲೇಂ: ಆಕ್ರಮಿತ ಪಶ್ಚಿಮದಂಡೆಯಲ್ಲಿ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು ಅವರ ಮೃತದೇಹಗಳನ್ನು ಇಸ್ರೇಲ್ ಪಡೆ ತನ್ನ ವಶದಲ್ಲಿಯೇ ಇರಿಸಿಕೊಂಡಿದೆ ಎಂದು ಫೆಲೆಸ್ತೀನ್ ಅಧಿಕಾರಿ ಹೇಳಿದ್ದಾರೆ.
ಪಶ್ಚಿಮದಂಡೆಯ ಅಲ್ ಫರಾ ಪ್ರದೇಶದಲ್ಲಿ ತನ್ನ ಯೋಧರು ಮೂವರು ಸಶಸ್ತ್ರ ಹೋರಾಟಗಾರರನ್ನು ಹತ್ಯೆ ಮಾಡಿವೆ. ಇವರು ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿದ್ದರು. ಜತೆಗೆ ಇಬ್ಬರು ವ್ಯಕ್ತಿಗಳನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. 1967ರಿಂದ ಇಸ್ರೇಲ್ ಆಕ್ರಮಿಸಿಕೊಂಡಿರುವ ಪಶ್ಚಿಮದಂಡೆಯಲ್ಲಿ 2023ರ ಅಕ್ಟೋಬರ್ ನಲ್ಲಿ ಗಾಝಾ ಪಟ್ಟಿಯಲ್ಲಿ ಯುದ್ಧ ಆರಂಭಗೊಂಡಂದಿನಿಂದ ಹಿಂಸಾಚಾರ ಉಲ್ಬಣಿಸಿದ್ದು ಇಸ್ರೇಲ್ ಸೇನೆಯ ದಾಳಿಯಲ್ಲಿ ಕನಿಷ್ಠ 897 ಫೆಲೆಸ್ತೀನೀಯರು ಸಾವನ್ನಪ್ಪಿರುವುದಾಗಿ ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
Next Story