ಕಾಬೂಲ್: ಸರ್ಕಾರಿ ಕಚೇರಿಗಳ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಒಬ್ಬ ಮೃತ್ಯು

ಸಾಂದರ್ಭಿಕ ಚಿತ್ರ
ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಗುರುವಾರ ಸರ್ಕಾರಿ ಕಚೇರಿಗಳ ಬಳಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇತರ ಮೂವರು ಗಾಯಗೊಂಡಿರುವುದಾಗಿ ಅಫ್ಘಾನಿಸ್ತಾನ ಸರಕಾರದ ವಕ್ತಾರರು ಹೇಳಿದ್ದಾರೆ.
ಆತ್ಮಹತ್ಯಾ ಬಾಂಬರ್ನನ್ನು ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. ಇದು ಅಫ್ಘಾನಿಸ್ತಾನದಲ್ಲಿ ಈ ವಾರ ನಡೆದ ಎರಡನೇ ಸ್ಫೋಟವಾಗಿದೆ ಎಂದು ವಸತಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯ ಹೇಳಿದೆ. ಅಮೆರಿಕ ಸೇರಿದಂತೆ ಹಲವು ದೇಶಗಳ ರಾಯಭಾರಿ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳಿರುವ ಪ್ರದೇಶದ ಸಮೀಪ ನಡೆದಿರುವ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story