ಇಸ್ರೇಲ್ ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇರಾನ್ ನ ಪರಮೋಚ್ಚ ನಾಯಕ ಖಾಮಿನೈ ಎಕ್ಸ್ ಖಾತೆ ಅಮಾನತು
ಇರಾನ್ ಪರಮೋಚ್ಚ ನಾಯಕ ಅಲಿ ಅಯಾತುಲ್ಲಾ ಖಾಮಿನೈ (PTI)
ಇರಾನ್: ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇರಾನ್ ಪರಮೋಚ್ಚ ನಾಯಕ ಅಲಿ ಅಯಾತುಲ್ಲಾ ಖಾಮಿನೈ ಅವರ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ಖಾಮಿನೈ ಎಕ್ಸ್ ಖಾತೆಯನ್ನು ತೆರೆದಿದ್ದರು, ಅದರಲ್ಲಿ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಿ ಇಸ್ರೇಲ್ ಗೆ ಪ್ರತ್ಯುತ್ತರ ನೀಡುವುದಾಗಿ ಹೇಳಿದ್ದರು.
ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇರಾನ್ ಪರಮೋಚ್ಚ ಅಲಿ ಖಾಮಿನೈ ಅವರ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿದ ಕೆಲವೇ ಗಂಟೆಗಳಲ್ಲಿ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎನ್ನಲಾಗಿದೆ. "ಜಿಯೋನಿಸ್ಟ್ ಆಡಳಿತವು ತಪ್ಪು ಮಾಡಿದೆ. ಇರಾನ್ ಕುರಿತು ಅವರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ರಾಷ್ಟ್ರವು ಯಾವ ರೀತಿಯ ಶಕ್ತಿ, ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಅರ್ಥ ಮಾಡಿಸುತ್ತೇವೆ" ಎಂದು ಅವರು ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದರು.
@Khamenei_Heb ಖಾತೆಯನ್ನು ಎಕ್ಸ್ (X) ಅಮಾನತುಗೊಳಿಸಿದೆ. ಖಾತೆಯು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ಎಕ್ಸ್ ಹೇಳಿಕೊಂಡಿದೆ.