ನೇಪಾಳದಲ್ಲಿ ಭೀಕರ ಪ್ರವಾಹ: ಮೃತರ ಸಂಖ್ಯೆ 112ಕ್ಕೆ ಏರಿಕೆ, 68 ಮಂದಿ ನಾಪತ್ತೆ
Photo: PTI
ಕಠ್ಮಂಡು: ನೇಪಾಳದಲ್ಲಿ ಸುರಿದ ನಿರಂತರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, 100 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ರಾಜಧಾನಿ ಕಠ್ಮಂಡು ಸಹಿತ ದೇಶದ ಹಲವೆಡೆ ಭಾರಿ ಮಳೆ, ಪ್ರವಾಹದಿಂದ ಸಾವಿರಾರು ಮಂದಿ ಮನೆ ಕಳೆದುಕೊಂಡಿದ್ದಾರೆ.
ಪ್ರವಾಹದಲ್ಲಿ ಮೃತರ ಸಂಖ್ಯೆ 112ಕ್ಕೆ ಏರಿಕೆಯಾಗಿದ್ದು, 68 ಮಂದಿ ನಾಪತ್ತೆಯಾಗಿದ್ದಾರೆ. 3000 ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ದೇಶದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ನೇಪಾಳದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಕ್ತಾರ ಬಸಂತ, ನಾಪತ್ತೆಯಾದವರನ್ನು ಹುಡುಕಲು ಪೊಲೀಸರು ಸ್ಥಳೀಯರೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
Next Story