ಪಾಕಿಸ್ತಾನ: ಬಾಲಕಿಯರ ಶಾಲೆಗೆ ಬಾಂಬ್ ದಾಳಿ
ಸಾಂದರ್ಭಿಕ ಚಿತ್ರ
ಇಸ್ಲಮಾಬಾದ್: ಪಾಕಿಸ್ತಾನದ ಖೈಬರ್ಪಖ್ತೂಂಕ್ವಾ ಪ್ರಾಂತದ ದಕ್ಷಿಣ ವಝೀರಿಸ್ತಾನ್ ಜಿಲ್ಲೆಯಲ್ಲಿರುವ ಬಾಲಕಿಯರ ಶಾಲೆಯ ಮೇಲೆ ಶಂಕಿತ ಉಗ್ರರು ಬಾಂಬ್ ದಾಳಿ ನಡೆಸಿದ್ದು ಶಾಲೆಯ ಕಟ್ಟಡಕ್ಕೆ ಭಾರೀ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಗುರುವಾರ ರಾತ್ರಿ ನಡೆದ ಬಾಂಬ್ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಕೊಂಡಿಲ್ಲ. ಆದರೆ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್ ಸಂಘಟನೆ ದಾಳಿ ನಡೆಸಿರುವ ಸಾಧ್ಯತೆಯಿದೆ. ಇದೇ ಪ್ರಾಂತದಲ್ಲಿ ಈ ತಿಂಗಳ ಆರಂಭದಲ್ಲಿ ಮತ್ತೊಂದು ಶಾಲೆಯ ಮೇಲೆ ಬಾಂಬ್ದಾಳಿ ನಡೆದಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಫ್ದರ್ ಖಾನ್ ಹೇಳಿದ್ದಾರೆ.
Next Story