ಸಿರಿಯಾ: ಇರಾನ್ ರಾಯಭಾರ ಕಚೇರಿಯ ಸಿಬ್ಬಂದಿಯ ಹತ್ಯೆ
ಸೈಯದ್ ದಾವೂದ್ | PC : iranintl
ಟೆಹ್ರಾನ್: ಸಿರಿಯಾ ರಾಜಧಾನಿ ದಮಾಸ್ಕಸ್ನಲ್ಲಿರುವ ಇರಾನ್ ರಾಯಭಾರ ಕಚೇರಿಯ ಸಿಬ್ಬಂದಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ನ ವಿದೇಶಾಂಗ ಇಲಾಖೆ ಹೇಳಿದೆ.
ಕಾರಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆದಿದ್ದು ಸಿಬ್ಬಂದಿ ಸೈಯದ್ ದಾವೂದ್ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ಇರಾನ್ಗೆ ಸ್ಥಳಾಂತರಿಸಲಾಗಿದೆ. ಸಿರಿಯಾದ ಮಧ್ಯಂತರ ಸರಕಾರ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇರಾನ್ ವಿದೇಶಾಂಗ ಇಲಾಖೆಯ ವಕ್ತಾರರು ಆಗ್ರಹಿಸಿದ್ದಾರೆ.
Next Story