ಪಾಕಿಸ್ತಾನ | ಉಗ್ರರ ದಾಳಿಯಲ್ಲಿ 6 ಯೋಧರು ಮೃತ್ಯು
ಸಾಂದರ್ಭಿಕ ಚಿತ್ರ / Photo:NDTV
ಪೇಷಾವರ : ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಅಧಿಕಾರಿ ಸೇರಿದಂತೆ 6 ಯೋಧರು ಮೃತಪಟ್ಟಿದ್ದಾರೆ. ಭದ್ರತಾ ಪಡೆಗಳ ಪ್ರತಿದಾಳಿಯಲ್ಲಿ 6 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಶನಿವಾರ ಹೇಳಿದೆ.
ಅಫ್ಘಾನಿಸ್ತಾನದ ಗಡಿಭಾಗದ ಉತ್ತರ ವಝೀರಿಸ್ತಾನ್ ಜಿಲ್ಲೆಯ ಸ್ಪಿನ್ವಾರ್ಮ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ 6 ಯೋಧರು ಸಾವನ್ನಪ್ಪಿದ್ದಾರೆ. ನಿಷೇಧಿತ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ದಾಳಿಯ ಹೊಣೆ ವಹಿಸಿಕೊಂಡಿದೆ. ಭದ್ರತಾ ಪಡೆ ನಡೆಸಿದ ಪ್ರತಿದಾಳಿಯಲ್ಲಿ 6 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಖೈಬರ್ ಪಖ್ತೂಂಕ್ವಾದ ಸ್ವಾತ್ ನಗರದಲ್ಲಿ ಶನಿವಾರ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಸೇನೆ ಹೇಳಿದೆ.
Next Story