ರಶ್ಯ ಉಗ್ರರ ದಾಳಿ ಪ್ರಕರಣ; ಆರೋಪಿಗಳ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲು
Photo: X \ @den_kazansky
ಮಾಸ್ಕೋ: ಮಾಸ್ಕೋದ ಹೊರವಲಯದ ಕ್ರೊಕಸ್ ಸಿಟಿ ಸಭಾಂಗಣದಲ್ಲಿ ಶುಕ್ರವಾರ ರಾತ್ರಿ ಕನಿಷ್ಟ 133 ಮಂದಿಯ ಸಾವಿಗೆ ಕಾರಣವಾದ ಭೀಕರ ಶೂಟೌಟ್, ಬಾಂಬ್ ದಾಳಿ ಪ್ರಕರಣದ ಶಂಕಿತ 4 ಆರೋಪಿಗಳ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲಿಸಲಾಗಿದ್ದು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ ಎಂದು ಮಾಸ್ಕೋದ ಬಾಸ್ಮಾನಿ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು ಹೇಳಿದ್ದಾರೆ.
4 ಆರೋಪಿಗಳನ್ನು ಮೇ 22ರವರೆಗೆ ಕಸ್ಟಡಿಯಲ್ಲಿ ವಿಚಾರಣೆ ನಡೆಸಲು ಅವಕಾಶವಿದೆ. ಅಪರಾಧ ಸಾಬೀತಾದರೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
ಈ ಮಧ್ಯೆ, ಭೀಕರ ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಕ್ರಿಯೆ ಮುಂದುವರಿದಿದ್ದು ವಿದೇಶದಲ್ಲಿರುವ ರಶ್ಯನ್ ದೂತಾವಾಸದಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಪುಷ್ಪಾಂಜಲಿ ಸಲ್ಲಿಸಿದ್ದಾರೆ. ಗಾಯಗೊಂಡವರಿಗೆ ನೆರವಾಗಲು ರಶ್ಯದಲ್ಲಿ 5 ಸಾವಿರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ.
Next Story