ಅಮೆರಿಕ: ಆಸ್ಪತ್ರೆಯಲ್ಲಿ ಶೂಟೌಟ್; ಭದ್ರತಾ ಅಧಿಕಾರಿ ಸೇರಿದಂತೆ ಇಬ್ಬರು ಮೃತ್ಯು

ಸಾಂದರ್ಭಿಕ ಚಿತ್ರ
ನ್ಯೂಯಾರ್ಕ್: ಅಮೆರಿಕದ ಪೆನ್ನಿಸಿಲ್ವೇನಿಯಾದ ಯಾರ್ಕ್ ಕೌಂಟಿಯಲ್ಲಿನ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಪ್ರವೇಶಿಸಿದ ಬಂದೂಕುಧಾರಿ ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡ ಘಟನೆ ನಡೆದಿದೆ. ಈ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದು ಆರೋಪಿಯನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯುಪಿಎಂಸಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಶೂಟೌಟ್ ನಡೆದಿದ್ದು ವೈದ್ಯ, ನರ್ಸ್, ರೋಗಿಯ ಸಂಬಂಧಿ ಹಾಗೂ ಇಬ್ಬರು ಅಧಿಕಾರಿಗಳು ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಅಪಹರಿಸಲು ಪ್ರಯತ್ನಿಸಿದ ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ಕಳೆದ ವಾರ ಇದೇ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ರೋಗಿಯೊಬ್ಬನನ್ನು ಭೇಟಿಯಾಗಲು ಬಂದಿದ್ದು ಇದು ಪೂರ್ವನಿಯೋಜಿತ ದಾಳಿಯಾಗಿರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
Next Story