ದಕ್ಷಿಣ ಕೊರಿಯಾ: ಹೆದ್ದಾರಿ ಮೇಲ್ಸೇತುವೆ ಕುಸಿದು ನಾಲ್ವರು ಮೃತ್ಯು; 6 ಮಂದಿಗೆ ಗಾಯ

Photo Credit | Yonhap/AFP
ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ಮಂಗಳವಾರ ನಿರ್ಮಾಣ ಹಂತದಲ್ಲಿದ್ದ ಹೆದ್ದಾರಿ ಮೇಲ್ಸೇತುವೆ ಕುಸಿದು 4 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇತರ 6 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಸಿಯೋಲ್ನ ದಕ್ಷಿಣದಲ್ಲಿರುವ ಚಿಯೊನಾನ್ ನಗರದಲ್ಲಿ 10 ಕಾರ್ಮಿಕರು ಹೆದ್ದಾರಿ ಮೇಲ್ಸೇತುವೆ ಕಾಮಗಾರಿ ನಡೆಸುತ್ತಿದ್ದಾಗ ಸೇತುವೆ ಕುಸಿದಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡ 8 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಇಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳಲ್ಲಿ ಐದು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
Next Story