ಸ್ವಾತಿ ಮಲಿವಾಲ್ ಗೆ ಹಲ್ಲೆ ಪ್ರಕರಣ : ಬಿಭವ್ ಕುಮಾರ್ ಗೆ ಜಾಮೀನು ನಿರಾಕರಣೆ
ಬಿಭವ್ ಕುಮಾರ್ , ಸ್ವಾತಿ ಮಲಿವಾಲ್ | PTI
ಹೊಸದಿಲ್ಲಿ : ಆಪ್ ನ ರಾಜ್ಯ ಸಭಾ ಸದಸ್ಯೆ ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣದ ಆರೋಪಿಯಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಗೆ ದಿಲ್ಲಿ ಉಚ್ಚ ನ್ಯಾಯಾಯ ಶುಕ್ರವಾರ ಜಾಮೀನು ನೀಡಲು ನಿರಾಕರಿಸಿದೆ.
ಬಿಭವ್ ಕುಮಾರ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿರಟ್ಟ, ಅವರಿಗೆ ಜಾಮೀನು ನೀಡಲು ಯಾವುದೇ ಕಾರಣ ಇಲ್ಲ ಎಂದು ಹೇಳಿದರು.
ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಸ್ವಾತಿ ಮಲಿವಾಲ್ ಮೇಲೆ ಮೇ 13ರಂದು ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಬಿಭವ್ ಕುಮಾರ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಿಭವ್ ಕುಮಾರ್ನನ್ನು ಮೇ 18ರಂದು ಬಂಧಿಸಲಾಗಿತ್ತು.
ಬಿಭವ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಮೇ 16ರಂದು ಎಫ್ಐಆರ್ ದಾಖಲಿಸಲಾಗಿತ್ತು. ಈ ಆರೋಪ ಸುಳ್ಳು. ಈ ಕುರಿತ ತನಿಖೆ ಪೂರ್ಣಗೊಂಡಿರುವುದರಿಂದ ತನ್ನ ಕಸ್ಟಡಿ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿ ಬಿಭವ್ ಕುಮಾರ್ ಜಾಮೀನು ಕೋರಿದ್ದರು.