ಚೀನಾ ಪ್ರಜೆಗಳ ಹತ್ಯೆ ಪ್ರಕರಣ ; 12 ಮಂದಿ ಬಂಧನ
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಕಳೆದ ವಾರ ನಡೆದ ಆತ್ಮಹತ್ಯಾ ದಾಳಿಯಲ್ಲಿ 5 ಚೀನೀ ಪ್ರಜೆಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ದಾಳಿಯ ಸೂತ್ರಧಾರ ಸಹಿತ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಿಷೇಧಿತ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಭಯೋತ್ಪಾದಕ ಸಂಘಟನೆ ಈ ಆತ್ಮಾಹುತಿ ದಾಳಿ ನಡೆಸಿದೆ ಎಂದು ಭಯೋತ್ಪಾದನೆ ನಿಗ್ರಹ ದಳ ಆರೋಪಿಸಿದೆ. ಆತ್ಮಹತ್ಯಾ ಬಾಂಬರ್ ನನ್ನು ಅಫ್ಘಾನಿಸ್ತಾನದಿಂದ ಕರೆತಂದ ಪ್ರಕರಣದ ಸೂತ್ರಧಾರ ಹಝ್ರತ್ ಬಿಲಾಲ್ ಸೇರಿದಂತೆ ಒಟ್ಟು 12 ಆರೋಪಿಗಳನ್ನು ವಿವಿಧೆಡೆ ನಡೆಸಿದ ದಾಳಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
Next Story