ಭಾರತ- ಪಾಕ್ ನಡುವೆ ಫಲಪ್ರದ ಮಾತುಕತೆಗೆ ಸ್ವಾಗತ : ಅಮೆರಿಕ
Photo : PTI
ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿಯುತ ಮತ್ತು ಫಲಪ್ರದ ಮಾತುಕತೆಯನ್ನು ಸ್ವಾಗತಿಸುವುದಾಗಿ ಅಮೆರಿಕ ಹೇಳಿದ್ದು, ಆದರೆ ಮಾತುಕತೆಯ ವೇಗ, ವ್ಯಾಪ್ತಿ ಮತ್ತು ಸ್ವರೂಪವನ್ನು ಈ ದೇಶಗಳೇ ನಿರ್ಧರಿಸುತ್ತವೆ ಎಂದಿದೆ.
`ಅಮೆರಿಕವು ಭಾರತ ಮತ್ತು ಪಾಕಿಸ್ತಾನದೊಂದಿಗಿನ ತನ್ನ ಸಂಬಂಧವನ್ನು ಗೌರವಿಸುತ್ತದೆ ಮತ್ತು ಎರಡೂ ದೇಶಗಳ ನಡುವೆ ಫಲಪ್ರದ ಮಾತುಕತೆಯನ್ನು ಸ್ವಾಗತಿಸುತ್ತದೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಹೇಳಿದ್ದಾರೆ.
ಶೆಹಬಾಝ್ ಷರೀಫ್ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಿಲರ್ `ಪ್ರಧಾನಿ ಮೋದಿಯ ಹೇಳಿಕೆಯನ್ನು ನಾವು ಖಂಡಿತವಾಗಿಯೂ ಸ್ವಾಗತಿಸುತ್ತೇವೆ' ಎಂದರು. ಕಾಶ್ಮೀರ ಪ್ರದೇಶದಲ್ಲಿ ಅಸ್ಥಿರತೆಯನ್ನು ಉಂಟು ಮಾಡಲು ಮತ್ತು ಪ್ರದೇಶವನ್ನು ಅಸ್ಥಿರಗೊಳಿಸಲು ಭಯೋತ್ಪಾದನೆಯನ್ನು ಒಂದು ಸಾಧನವಾಗಿ ಬಳಸುವುದನ್ನು ಪಾಕಿಸ್ತಾನ ನಿಲ್ಲಿಸಿದರೆ ಮಾತ್ರ ಅದರೊಂದಿಗೆ ಮಾತುಕತೆ ಸಾಧ್ಯ ಎಂದು ಭಾರತ ಹೇಳಿದೆ.