ಕಲಬುರಗಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್: 205 ಪ್ರಕರಣ ಇತ್ಯರ್ಥ; 4.28 ಕೋಟಿ ರೂ. ಪರಿಹಾರಕ್ಕೆ ಆದೇಶ
ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 205 ಪ್ರಕರಣಗಳು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ 4,28,99,155 ರೂ. ಪರಿಹಾರ ನೀಡುವಂತೆ ಜನತಾ ಅದಾಲತ್ ಆದೇಶಿಸಿದೆ.
ಹೈಕೋರ್ಟ್ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋಟರ್ ವಾಹನ ವಿಮೆ ಪ್ರಕರಣಗಳನ್ನು ವಕೀಲರು ಮತ್ತು ಕಕ್ಷಿದಾರರ ಸಮಕ್ಷಮ ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಯಿತು.
ಜನತಾ ಅದಾಲತ್ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಎಂ.ಜಿ.ಎಸ್.ಕಮಾಲ್ ಮತ್ತು ನ್ಯಾ. ಜಿ.ಬಸವರಾಜ ಭಾಗವಹಿಸಿದ್ದರು ಎಂದು ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವೀ.ಹಿರೇಮಠ ತಿಳಿಸಿದ್ದಾರೆ.
Next Story