76ನೇ ಗಣರಾಜ್ಯೋತ್ಸವ: ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ

ಕಲಬುರಗಿ: 76ನೆಯ ಗಣರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಜಗದೇವ ಗುತ್ತೇದಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಶಿವಾನಂದ ಪಾಟೀಲ, ಶರಣು ಮೋದಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಮಹಿಳಾ ವಿಭಾಗದ ನಾಯಕಿಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Next Story