ಕಲಬುರಗಿ: ನಕಲಿ ಬಂದೂಕು ಹಿಡಿದು ರೀಲ್ಸ್ ಮಾಡಿದ ಇಬ್ಬರ ವಿರುದ್ದ ಪ್ರಕರಣ ದಾಖಲು
ಕಲಬುರಗಿ: ನಕಲಿ ಬಂದೂಕು ಹಿಡಿದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹರಿಬಿಟ್ಟು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ವಾಡಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದೆ.
ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಮುಹಮ್ಮದ್ ಅಜ್ಜಲ್ ಶೇಖ್ (27), ದೀಪಕ್ ಚವ್ಹಾಣ್ (23) ವಿರುದ್ಧ ಪ್ರಕರಣ ದಾಖಲಿಸಿ ಅವರಲ್ಲಿದ್ದ ನಕಲಿ ಬಂದೂಕು ಜಪ್ತಿ ಮಾಡಿಕೊಳ್ಳಲಾಗಿದೆ.
ಸಾರ್ವಜನಿಕರು ನಕಲಿ ಪಿಸ್ತೂಲ್, ಮಾರಕಾಸ್ತ್ರ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜನರಲ್ಲಿ ಭಯ ಮೂಡಿಸುವಂಥ ಕೆಲಸ ಮಾಡಬೇಡಿ. ಇಂಥ ಘಟನೆ ಮರುಕಳಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Next Story