ಎ.16ರಂದು ಕಲಬುರಗಿಯಲ್ಲಿ ವಿಭಾಗಮಟ್ಟದ ಬೃಹತ್ ಉದ್ಯೋಗ ಮೇಳ

ಸಾಂದರ್ಭಿಕ ಚಿತ್ರ
ಕಲಬುರಗಿ : ನಗರದ ಕೆ.ಸಿ.ಟಿ. ಇಂಜಿನೀಯರಿಂಗ್ ಕಾಲೇಜಿನ ಆವರಣದಲ್ಲಿ ಎ.16 ರಂದು ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರವಾಗಿ ಹಾಗೂ ವರ್ಚುವಲ್ ಮೂಲಕ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಬೃಹತ್ ಉದ್ಯೋಗ ಮೇಳದಲ್ಲಿ ಅಂದಾಜು 300ಕ್ಕಿಂತ ಹೆಚ್ಚಿನ ಕಂಪನಿಗಳು ಹಾಗೂ 25,000ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಲಿದ್ದಾರೆ ಎಂದು ಕಲಬುರಗಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ತಿಳಿಸಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸುವರು.
ಈ ಉದ್ಯೋಗ ಮೇಳದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳು, ಸಂಪುಟ ದರ್ಜೆಯ ಸಚಿವರು, ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು, ಈ ಭಾಗದ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕೈ.ತ.ಉ. ಇಲಾಖೆಯ ಸಹಾಯಕ ನಿರ್ದೇಶಕರ ಬಸವರಾಜ ಕಣಮಸ್ ಇವರ ಮೊಬೈಲ್ ಸಂಖ್ಯೆ: 9449513639 ಗೆ ಸಂಪರ್ಕಿಸಲು ಕೊರಲಾಗಿದೆ.