ಕೋಮು ಭಾವನೆಗೆ ಧಕ್ಕೆ ಆರೋಪ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಎಫ್ಐಆರ್
ಕಲಬುರಗಿ : ಕೋಮು ಭಾವನೆಗೆ ಧಕ್ಕೆ ಉಂಟು ಮಾಡಿರುವ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಪ್ರಕರಣ ದಾಖಲಾಗಿದೆ.
ಯಡ್ರಾಮಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರದ ಸುದ್ದಿಗೋಷ್ಠಿಯಲ್ಲಿ ಎರಡು ಕೋಮುಗಳ ನಡುವೆ ದ್ವೇಷ ಭಾವನೆ ಮೂಡಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಮಣಿಕಂಠ ರಾಠೋಡ ವಿರುದ್ದ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿರುವ ಮಣಿಕಂಠ ರಾಠೋಡನ ವಿರುದ್ದ ಕ್ರಮ ಕೈಗೊಳ್ಳುವಂತೆ ರಜಾ ಅಕಾಡೆಮಿಯ ಕಾರ್ಯದರ್ಶಿ ಮುಹಮ್ಮದ್ ಖಯಾಮ್ ಅಲಿ ಅವರು, ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮುಹಮ್ಮದ್ ಖಯಾಮ್ ಅಲಿ ಅವರ ಆರೋಪದ ಮೇರೆಗೆ ಮಣಿಕಂಠ ರಾಠೋಡನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
Next Story