ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ : ಸರಕಾರವು ಸಾರ್ವಜನಿಕ ಉಪಯೋಗಕ್ಕಾಗಿ ಇಲಾಖೆಯ ಅಭಿವೃದ್ಧಿಗಾಗಿ ಹಂತ ಹಂತವಾಗಿ ನೀಡಲಾದ ಅನುದಾನವನ್ನು ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ನೇತೃತ್ವದಲ್ಲಿ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯುಮೆಂಟ್, ಜಿಲ್ಲಾ ಪಂಚಾಯತ್ ಅನಿರ್ಭಂದಿತ ನಿಧಿ ಅನುದಾನ ಹಾಗೂ ತಾಲೂಕು ಪಂಚಾಯತ್ ಅನಿರ್ಭಂದಿತ ನಿಧಿ ಅನುದಾನ ಯೋಜನೆ/ಇತರೆ ಕಟ್ಟಡ ಕಾಮಗಾರಿ ಮಂಜೂರಾದ ಆರೋಗ್ಯ ಇಲಾಖೆಯ ಕಟ್ಟಡಗಳ ರಿಪೇರಿ ಕಾಮಗಾರಿ ಕುರಿತು ಕರೆದ ಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಕಟ್ಟಡ, ಹೊಸ ಕಟ್ಟಡ ಕಾಮಗಾರಿ, ಹಳೆ ಕಟ್ಟಡ ರಿಪೇರಿ ಕಾಮಗಾರಿ ಸರಿಯಾದ ರೀತಿಯಲ್ಲಿ ಲೋಪದೋಷಗಳು ಆಗದಂತೆ ಅಧಿಕಾರಿಗಳು ಕಾಳಜಿ ವಹಿಸಿ ಕ್ರಮವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕಲಬುರಗಿ ಹಾಗೂ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಹಾಗೂ PRED, KRIDL ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಇನ್ನಿತರರು ಭಾಗಿಯಾಗಿದ್ದರು.