ಆಳಂದ | ಚುನಾವಣೆ ಬಿಎಲ್‌ಒಗಳಿಗೆ ಪ್ರಶಂಸನಾ ಪತ್ರ ವಿತರಣೆ

ಕಲಬುರಗಿ : ಆಳಂದ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಿದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ ಭೂತಮಟ್ಟದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಭೂತಮಟ್ಟದ ಅಧಿಕಾರಿಗಳಿಗೆ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಅವರು ಪ್ರಸಂಶನಾ ಪತ್ರವನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಅವರು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಚುನಾವಣೆಗಳು ಮಹತ್ವ ಪಾತ್ರವಹಿಸುತ್ತಿವೆ. ಪ್ರಜಾಪ್ರಭುತ್ವದ ಬುನಾದಿ ಪ್ರಜೆಗಳಲ್ಲಿದೆ ಎಂದು ಪರಿಗಣಿಸಿ, ಮತದಾರರಿಗೆ ಜಾಗೃತಿ ಮೂಡಿಸಲು ಸಕ್ರಿಯವಾಗಿ ನಿಯೋಜಿತ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುವಲ್ಲಿ ದೊಡ್ಡ ಪಾತ್ರ ಅಗತ್ಯವಿದೆ ಎಂದು ಹೇಳಿದರು.
ಗ್ರೇಡ್-2 ತಹಸೀಲ್ದಾರ ಬಿ.ಜಿ. ಕುದರಿ, ಚುನಾವಣೆ ಶಿರಸ್ತೆದಾರ ಮಹೇಶ ಸಜ್ಜನ್ ಮಾತನಾಡಿದರು. ಶಿರಸ್ತೆದಾರ ರಾಕೇಶ ಶೀಲವಂತ, ಜೀತೆಂದ್ರ ತಳವಾರ, ಸೇರಿದಂತೆ ಭೂತಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭೂತಮಟ್ಟದಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದ ಪಡಸಾವಳಿ ಅಂಗನವಾಡಿ ಕೇಂದ್ರ 5ರ ಅನ್ನಪೂರ್ಣ ಕಲ್ಲೇಶ ಸುತಾರ್ ಸೇರಿ ಹಲವರಿಗೆ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.