Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಎಲ್ಲ ವಿವಿಗಳಲ್ಲಿ ಖಾಯಂ ಹುದ್ದೆಗಳ...

ಎಲ್ಲ ವಿವಿಗಳಲ್ಲಿ ಖಾಯಂ ಹುದ್ದೆಗಳ ನೇಮಕಾತಿ ನಡೆಯಲಿ: ಶಶೀಲ್ ನಮೋಶಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Jan 2025 10:36 PM IST
share
ಎಲ್ಲ ವಿವಿಗಳಲ್ಲಿ ಖಾಯಂ ಹುದ್ದೆಗಳ ನೇಮಕಾತಿ ನಡೆಯಲಿ: ಶಶೀಲ್ ನಮೋಶಿ ಆಗ್ರಹ

ಕಲಬುರಗಿ: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಖಾಲಿಯಿರುವ ಹುದ್ದೆಗಳನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉನ್ನತ ಶಿಕ್ಷಣ ಪದ್ಧತಿ ಅವನತಿಯತ್ತ ಸಾಗುತ್ತಿದೆ ಎಂಬುವುದಕ್ಕೆ ಕೆಲವೊಂದು ದಿನಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಉನ್ನತ ಶಿಕ್ಷಣದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿವೆ, ಖಾಲಿಯಾದ ಖಾಯಂ ಹುದ್ದೆಗಳ ಭರ್ತಿಗಾಗಿ ಈಗಾಗಲೇ ನಾನು ಸದನದಲ್ಲಿ ಪ್ರಶ್ನಿಸಿ ಸಚಿವರ ಗಮನ ಸೆಳೆದಿದ್ದೇನೆ. ಹಲವಾರು ಬಾರಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ, ಚರ್ಚಿಸಿರುವೆ ಇಲ್ಲಿಯವರೆಗೂ ಇದಕ್ಕೆ ಪರಿಹಾರ ಒದಗಿಸಲು ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಟ್ಟು 2723 ಬೋಧಕ ಹುದ್ದೆಗಳು ಖಾಲಿ ಇದ್ದು, ರಾಜ್ಯದ 32 ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4709 ಹುದ್ದೆಗಳು ಮಂಜೂರಾಗಿದ್ದರೆ, ಇದರಲ್ಲಿ 2723 ಹುದ್ದೆಗಳು ಖಾಲಿ ಉಳಿದಿವೆ. ಪ್ರಸ್ತುತ ಎಲ್ಲ ವಿವಿಗಳಲ್ಲಿ ಕಾಯಂ ಕಾರ್ಯನಿರ್ವಹಿಸುವವರಿಗಿಂತ ಖಾಲಿ ಹುದ್ದೆಗಳ ಹೆಚ್ಚಿವೆ. ಈ ಹಿಂದೆ ನೇಮಕಗೊಂಡವರೂ ಸಹ ನಿವೃತ್ತಿಯಾಗಿದ್ದು ಕೆಲವರು ಮಾತ್ರ ಉಳಿದಿದ್ದು, ಇವರೂ ಕೆಲದೇ ವರ್ಷಗಳಲ್ಲಿ ನಿವೃತ್ತಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ 32 ವಿವಿಗಳಲ್ಲಿ ಬೋಧಕೇತರ ಹುದ್ದೆಗಳು 9317 ಮಂಜೂರಾಗಿದ್ದರೆ ಇದರಲ್ಲಿ 6328 ಹುದ್ದೆಗಳು ಖಾಲಿಯಿವೆ. ಇದರಿಂದ ವಿವಿಯಲ್ಲಿನ ವಿವಿಧ ಕೆಲಸಗಳನ್ನು ಮಾಡಲು ಸಿಬ್ಬಂದಿಯೇ ಇಲ್ಲ. ಹಲವು ಹುದ್ದೆಗಳನ್ನು ಒಬ್ಬರೇ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳು 371(ಜೆ) ನಿಯಮದಂತೆ ಭರ್ತಿ ಮಾಡಿ:

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ವಿಧಿ 371(ಜೆ) ಜಾರಿಯಾಗಿ ದಶಕ ಕಳೆದಿವೆ. ಆ ವಿಶೇಷ ಸ್ಥಾನಮಾನ 371(ಜೆ) ಅನ್ವಯ ಕಲ್ಯಾಣ ಕರ್ನಾಟಕ ಭಾಗದ ಯಾವುದೇ ಖಾಲಿ ಹುದ್ದೆಗಳಿಗೆ ಹಣಕಾಸು ಇಲಾಖೆಯ ಅನುಮತಿ ಬೇಕಾಗಿಲ್ಲ, ಆದರೂ ಈ ನಿಯಮವನ್ನು ಸರ್ಕಾರ ಜಾರಿ ಮಾಡಿಲ್ಲ. ಖಾಲಿ ಹುದ್ದೆ ಭರ್ತಿ ಯಾವಾಗ ಎಂದಾಗ ಹಣಕಾಸು ಇಲಾಖೆಯ ಕಡೆ ತೋರಿಸುವುದು ವಾಡಿಕೆಯಾಗಿದೆ. ಈಗಲಾದರೂ ವಿಶೇಷ ಸ್ಥಾನಮಾನ ಅನ್ವಯ ನಮ್ಮ ಭಾಗದ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X