ಆಳಂದ | ಅನಧಿಕೃತ ಆಸ್ಪತ್ರೆ ಮೇಲೆ ಆರೋಗ್ಯಾಧಿಕಾರಿಗಳಿಂದ ದಾಳಿ : ಆಸ್ಪತ್ರೆಗೆ ಬೀಗ

ಕಲಬುರಗಿ : ಆಳಂದ ಪಟ್ಟಣದ ಬಸ್ ನಿಲ್ದಾಣ ಮಾರ್ಗದ ಬಳಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಮಹಾಂತಪ್ಪ ಹಾಳಮಳಿ ತಂಡವು ದಾಳಿ ನಡೆಸಿ, ಆಸ್ಪತ್ರೆಗೆ ಬೀಗಹಾಕಿ ಎಚ್ಚರಿಕೆ ನೀಡಿದೆ.
ಅನಧಿಕೃತ ಆಸ್ಪತ್ರೆಯಲ್ಲಿ ತಾಂತ್ರಿಕ ಅನುಮತಿಗಳಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯಗಳು, ಲೈಸೆನ್ಸ್, ಮತ್ತು ಸಿಬ್ಬಂದಿಯ ದಾಖಲೆಗಳನ್ನು ಪರಿಶೀಲಿಸಿದ ನಂತರ, ಪ್ರಸ್ತುತ ಆಸ್ಪತ್ರೆಯ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ಪಡೆಯುವಂತೆ ಡಾ.ಹಾಳಮಳಿ ಅವರು ಮನವಿ ಮಾಡಿದ್ದಾರೆ.
Next Story