ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿಯಲ್ಲಿ ಬಂದ್ಗೆ ಕರೆ : ವಿಠ್ಠಲ್ ದೊಡ್ಮನಿ
ಕಲಬುರಗಿ : ಸಂಸತ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವುದನ್ನು ಖಂಡಿಸಿ, ದಲಿತರ ಪರ ಸಂಘಟನೆಗಳಿಂದ ಇದೇ ಡಿ.24ರಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಹಿರಿಯ ದಲಿತ ಮುಖಂಡ ವಿಠ್ಠಲ್ ದೊಡ್ಮನಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಮಿತ್ ಶಾ ಅಂಬೇಡ್ಕರ್ ಅವರ ಕುರಿತು ಈ ರೀತಿ ಮಾತನಾಡಿರುವುದು ಖಂಡನಾರ್ಹವಾಗಿದ್ದು, ಶಾ ಹೇಳಿಕೆಯನ್ನು ಖಂಡಿಸಿ ಡಿ.24ರಂದು ಬಂದ್ ಕರೆ ನೀಡಲಾಗಿದೆ ಎಂದು ತಿಳಿಸಿದರು.
ಕಲಬುರಗಿ ಬಂದ್ ಕರೆಗೆ ಹಲವಾರು ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿರುವುದು ಖಂಡಿಸುತ್ತೇವೆ, ಆತನ ಹೇಳಿಕೆ ಖಂಡಿಸಿ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡಿದ್ದಾರೆ ಎಂದರು.
ಗೋದ್ರಾ ಹತ್ಯಾಕಾಂಡ ಸೇರಿದಂತೆ ಹಲವು ಪ್ರಕರಣದಲ್ಲಿ ಅಮಿತ್ ಶಾ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ, ಮುಸ್ಲಿಂರ ವಿರುದ್ಧವೂ ಅನೇಕ ಷಡ್ಯಂತ್ರ ನಡೆಸಿದ್ದಾರೆ. ಇಂಥಹ ಹೇಳಿಕೆ ನೀಡಿರುವ ಅಮಿತ್ ಶಾ ರನ್ನು ಕೂಡಲೇ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಕಾಶ್ ಮೂಲಭಾರತಿ ಸೇರಿದಂತೆ ಅನೇಕ ದಲಿತ ಮುಖಂಡರು ಇದ್ದರು.