ಸಿ.ಟಿ.ರವಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ವಿಡಿಯೋ ಸಾಕ್ಷಿ ಇದೆ : ಸಿಎಂ ಸಿದ್ದರಾಮಯ್ಯ
ಕಲಬುರಗಿ : ಸದನದಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರುವ ಬಗ್ಗೆ ವಿಡಿಯೋ ಸಾಕ್ಷಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಜಯದೇವ ಆಸ್ಪತ್ರೆಯ ಉದ್ಘಾಟನೆಗೆ ಕಲಬುರಗಿ ವಿಮಾನ ನಿಲ್ದಾಣದಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಸಿಟಿ ರವಿ ಮಾತನಾಡಿರುವ ಬಗ್ಗೆ ವಿಡಿಯೋ ಇದೆ, ಒಬ್ಬ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ಸಿಟಿ ರವಿ ಈ ತರಹ ಹೇಳಿಕೆ ನೀಡಿರುವುದು ಖಂಡನಾರ್ಹ" ಎಂದು ತಿಳಿಸಿದ್ದಾರೆ.
ʼರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆʼ ಎಂದರು.
ಜಯದೇವ ಮಹತ್ವದ ಹೆಜ್ಜೆ :
ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದರು.