ಕೋಮು ದ್ವೇಷ ಭಾಷಣ ಆರೋಪ : ಆಂದೋಲಾ ಶ್ರೀ ವಿರುದ್ಧ ಪ್ರಕರಣ ದಾಖಲು

ಆಂದೋಲಾ ಶ್ರೀ
ಕಲಬುರಗಿ : ಕೋಮು ದ್ವೇಷ ಭಾಷಣ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎ.15ರಂದು ಚಿಂಚೋಳಿ ತಾಲ್ಲೂಕಿನ ಐನೊಳ್ಳಿ ಗ್ರಾಮದಲ್ಲಿ ಶ್ರೀ ರಾಮೋತ್ಸವ ಸಮಿತಿ ಆಯೋಜಿಸಿದ್ದ ಶ್ರೀ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಆಂದೋಲಾ ಶ್ರೀ, ಹಿಂದೂ - ಮುಸ್ಲಿಮರ ಮಧ್ಯೆ ಕೋಮು ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪೂರ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಶರಣು ಪಾಟೀಲ್ ಅವರ ದೂರಿನ ಮೇರೆಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story