ಎ.5 ರಂದು ಗುಲ್ಬರ್ಗಾ ವಿ.ವಿ. ಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ 118ನೇ ಜಯಂತ್ಯೋತ್ಸವ

ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯ ಮತ್ತು ಡಾ.ಬಾಬು ಜಗಜೀವನರಾಮ್ ಅಧ್ಯಯನ ಸಂಶೋಧನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಎ.5 ರಂದು ಬೆಳಿಗ್ಗೆ 10.30 ಗಂಟೆಗೆ ಗುಲ್ಬರ್ಗಾ ವಿ.ವಿ.ಯ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನರಾಮ್ ಅವರ 118ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗುಲ್ಬರ್ಗಾ ವಿ.ವಿ. ಪ್ರಭಾರಿ ಕುಲಪತಿ ಪ್ರೊ.ಗುರು ಶ್ರೀರಾಮಲು ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ.ವಡ್ಡಗೆರೆ ನಾಗರಾಜಯ್ಯ ಆಗಮಿಸುವರು.
ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ. ಶ್ರೀದೇವಿ ಎಸ್. ಕಟ್ಟಿಮನಿ, ವಿದ್ಯಾವಿಷಯಕ್ ಪರಿಷತ್ ಸದಸ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ. ಸಿ. ಸುಲೋಚನಾ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದು, ಮೌಲ್ಯಮಾಪನ ಕುಲಸಚಿವ ಡಾ.ಎನ್.ಜಿ.ಕಣ್ಣೂರ ಮತ್ತು ಹಣಕಾಸು ಅಧಿಕಾರಿ ಜಯಾಂಬಿಕಾ ಅವರು ಉಪಸ್ಥಿತರಿರುವರು.
Next Story