ಜನಪದ ಸಾಹಿತ್ಯ ಸಾಂಸ್ಕೃತಿಕ ಜೀವನಕ್ಕೆ ಬುನಾದಿ: ತೇಗಲತಿಪ್ಪಿ
ಕಲಬುರಗಿ: ಜನಪದ ಸಾಹಿತ್ಯ ಒಬ್ಬರಿಂದ ಒಬ್ಬರಿಗೆ ಹರಿದು ಬಂದಿದ್ದು ನಮ್ಮ ಸಾಂಸ್ಕೃತಿಕ ಜೀವನಕ್ಕೆ ಬುನಾದಿಯಾಗಿದೆ ಎ೦ದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ನವೆಂಬರ್ 10 ರಂದು ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಜಿಲ್ಲಾ ಪ್ರಥಮ ಜನಪದ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ. ಶೋಭಾದೇವಿ ಚೆಕ್ಕಿ ಅವರನ್ನು ಜಯನಗರದ ಹನುಮಾನ ದೇವಸ್ಥಾನದ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತ ಆಹ್ವಾನ ನೀಡಿ, ಸತ್ಕರಿಸಿ ಮಾತನಾಡಿದ ಅವರು, ಎಲ್ಲಾ ಸಾಹಿತ್ಯದ ಪ್ರಕಾರಗಳಿಗೆ ಜನಪದ ಸಾಹಿತ್ಯವೇ ಶ್ರೇಷ್ಠವಾಗಿದೆ. ಜನಸಾಮಾನ್ಯರ ಜೀವನ ಮಟ್ಟ ಎತ್ತರಿಸಲು ಮತ್ತು ಸಾಂಸ್ಕೃತಿಕ ಬದುಕನ್ನು ಕಟ್ಟಿ ಕೊಳ್ಳಲು ಜನಪದ ಸಾಹಿತ್ಯ ಪರಿಣಾಮಕಾರಿಯಾಗಿದೆ. ಇಂದು ಆಧುನಿಕ ಜೀವನ ಶೈಲಿಯಿಂದ ನಮ್ಮ ಜನಪದ ಕಲೆ ಮತ್ತು ಸಂಸ್ಕೃತಿ ಮರೀಚಿಕೆಯಾಗುತ್ತಿದೆ. ಅದನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲ ಪ್ರಯತ್ನಿಸಬೇಕಾಗಿದೆ ಎ೦ದು ಅವರು ಕರೆ ನೀಡಿದರು.
ನಿಯೋಜಿತ ಸಮ್ಮೇಳನಾಧ್ಯಕ್ಷೆ ಪ್ರೊ. ಶೋಭಾದೇವಿ ಚೆಕ್ಕಿ ಅವರು ಮಾತನಾಡಿ, ಜನಪದ ಸಾಹಿತ್ಯ ಸಮ್ಮೇಳನದ ಮೂಲಕ ಇಂದಿನ ಯುವ ಪೀಳಿಗೆಗೆ ಜನಪದ ಸಾಹಿತ್ಯದ ಮೌಲ್ಯಗಳನ್ನು ತಿಳಿಸಿ ಕೊಡಬೇಕಾಗಿದೆ. ಈ ಹಿನ್ನಲೆಯಾಗಿ ಪ್ರಪ್ರಥಮ ಬಾರಿಗೆ ಜನಪದ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಜನಪದ ಬೇರುಗಳನ್ನು ಇನ್ನಷ್ಟು ಗಟ್ಟಿಗೊಳಿಸಲು ಇಂಥ ಸಮ್ಮೇಳನಗಳು ಅವಶ್ಯಕವಾಗಿವೆ ಎಂದರು.
ಸ್ವಾಗತ ಸಮಿತಿ ಅಧ್ಯಕ್ಷ ಮಹ್ಮದ ಇಬ್ರಾಹಿಂ, ಕಾರ್ಯಾಧ್ಯಕ್ಷ ಬಿ.ಎನ್. ಪುಣ್ಯಶೆಟ್ಟಿ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಡಾ. ಚಂದ್ರಕಾಂತ ನರಿಬೋಳಿ, ಮುಖಂಡರಾದ ರೇವಣಸಿದ್ಧಪ್ಪ ಬೋಗಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ನಿವೃತ್ತ ಪ್ರಾಧ್ಯಾಪಕಿ ಪ್ರೊ. ಪಾರ್ವತಿದೇವಿ ಚೆಕ್ಕಿ, ಪ್ರಮುಖರಾದ ಹಣಮಂತಪ್ರಭು, ಸಿದ್ಧಲಿಂಗ ಜಿ ಬಾಳಿ, ರವೀಂದ್ರಕುಮಾರ ಭಂಟನಳ್ಳಿ, ಗಣೇಶ ಚಿನ್ನಾಕಾರ, ಧರ್ಮರಾಜ ಜವಳಿ, ರಮೇಶ ಡಿ ಬಡಿಗೇರ್, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ಎಮ್.ಎನ್. ಸುಗಂಧಿ, ಶಿವಶರಣ ಬಡದಾಳ, ವಿವೇಕಾನಂದ ಟೆಂಗಳಿ, ಹಣಮಂತರಾವ ಪಾಟೀಲ, ವಿನೋದಕುಮಾರ ಜೇನವೇರಿ, ಝಾಕೀರ್ ಹುಸೇನ್, ಮಹೇಶ ಚಿಂತನಪಳ್ಳಿ, ಮಧುಸೂಧನ ಚಿಂತನಪಳ್ಳಿ, ಸಂತೋಷ ಕುಡಳ್ಳಿ, ಶಿವಲಿಂಗಪ್ಪ ಅಷ್ಟಗಿ, ಚಂದ್ರಕಾಂತ ಸೂರನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.